ಬೆಂಗಳೂರು: ರಿಹ್ಯಾಬ್ ಸೆಂಟರ್ ನಲ್ಲಿ ಅಮಾನವೀಯ ಕೃತ್ಯ ನಡೆದಿರುವ ಘಟನೆ ಬೆಂಗಳೂರಿನ ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಮದ್ಯಪಾನ ವ್ಯಸನ ಬಿಡಲೆಂದು ರಿಹ್ಯಾಬ್ ಕೇಂದ್ರಕ್ಕೆ ಸೇರಿದ್ದ ಯುವಕನ ಮೇಲೆ ಅಲ್ಲಿನ ಸಿಬ್ಬಂದಿಗಳು ದೊಣ್ಣೆಯಿಂದ ಥಳಿಸಿದ್ದಾರೆ.
ರಿಹ್ಯಾಬ್ ಸೆಂಟರ್ ಗೆ ದಾಖಲಾಗಿರುವ ಯುವಕ ರೋಗಿಯನ್ನು ಅಲ್ಲಿನ ಸಿಬ್ಬಂದಿಗಳು ದೊಣ್ಣೆಯಿಂದ ಮನಬಂದಂತೆ ಥಳಿಸಿದ್ದು, ಸಿಬ್ಬಂದಿಗಳ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರೋಗಿಗಳ ಮೇಲೆ ಅಮಾನುಷವಾಗಿ ನಡೆದುಕೊಂಡಿರುವ ರಿಹ್ಯಾಬ್ ಸೆಂಟರ್ ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ರೋಗಿಯನ್ನು ಸಿಬ್ಬಂದಿಗಳು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.