ಬೆಂಗಳೂರು: ಜಾತಿಗಣತಿ ವರದಿಗೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಜಾತಿಗಣತಿ ವರದಿ ವಿರುದ್ಧ ಬೃಹತ್ ಹೋರಾಟ ನಡೆಸುವುದಾಗಿ ಒಕ್ಕಲಿಗ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಕೆಂಚಪ್ಪಗೌಡ, ಜಾತಿಗಣತಿ ವರದಿಯಿಂದ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ನಾವು ಹೋರಾಟ ಮಾಡುತ್ತೇವೆ. ಜಾತಿಗಣತಿ ವಿರುದ್ಧ ಬೃಹತ್ ಹೋರಾಟ ನಡೆಸುವುದಾಗಿ ತಿಳಿಸಿದರು.
ನಮ್ಮ ಹೋರಾಟದಲ್ಲಿ ಶಾಸಕರು, ಸಚಿವರು ಎಲ್ಲರೂ ಭಾಗಿಯಾಗಬೇಕು. ಸಮುದಾಯಕ್ಕೆ ಅನ್ಯಾಯವಾದಾಗ ಸುಮ್ಮನೇ ಕುಳಿತುಕೊಳ್ಳಬಾರದು. ನೀವು ಸಮುದಾಯದ ಸಹಕಾರ ಪಡೆದು ಆಯ್ಕೆ ಆಗಿಲ್ವಾ? ಹಾಗಾಗಿ ಹೋರಾಟಕ್ಕೆ ಬರಬೇಕು ಎಂದು ಕರೆ ನೀಡಿದ್ದಾರೆ.
ಇನ್ನು ಜಾತಿಗಣತಿ ವರದಿ ವಿರುದ್ಧ ಲಿಂಗಾಯಿತರು, ಒಕ್ಕಲಿಗರು ಹಾಗು ಅನ್ಯಾಯಕ್ಕೆ ಒಳಗಾದ ಎಲ್ಲಾ ಸಮುದಾಯದವರೂ ಒಗ್ಗಟ್ಟಾಗಿ ಹೋರಾಟ ಮಾಡಲು ನಿರ್ಧರಿಸಿದ್ದು, ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.