ನವದೆಹಲಿ: ಆಪರೇಷನ್ ಚಕ್ರ-ವಿ ಅಡಿಯಲ್ಲಿ 12 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಕಾರ್ಯಾಚರಣೆ ನಡೆಸಿರುವ ಸಿಬಿಐ ದೇಶದ 12 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ ನಾಲ್ವರು ಸೈಬರ್ ವಂಚಕರನ್ನು ಬಂಧಿಸಲಾಗಿದೆ.
ಮುಂಬೈ, ಉತ್ತರಪ್ರದೇಶದ ಮೊರಾದಾಬಾದ್ ನಿಂದ ತಲಾ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ರಾಜಸ್ಥಾನ ಸರ್ಕಾರದ ಕೋರಿಕೆ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದ್ದು, ಜುನ್ಜುನು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಮೂರು ತಿಂಗಳಲ್ಲಿ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಬರೋಬ್ಬರಿ 42 ಬಾರಿ 7.62 ಕೋಟಿ ರೂಪಾಯಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ ಬ್ಯಾಂಕ್ ಖಾತೆ ವಿವರ, ಡೆಬಿಟ್ ಕಾರ್ಡ್, ಚಕ್ ಬುಕ್,ಠೇವಣಿ ಸ್ಲಿಪ್, ಡಿಜಿಟಲ್ ಸಾಧನಗೌ ಸೇರಿದಂತೆ ಅಪಾರಪ್ರಮಾಣದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.