GOOD NEWS : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಕಲ್ಯಾಣ ಕರ್ನಾಟಕ’ ಭಾಗದಲ್ಲಿ ಮತ್ತೆ 5,500 ಶಿಕ್ಷಕರ ನೇಮಕಾತಿ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ್ತೆ 5,500 ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಕಲಬುರಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ. ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು ಎಂದರು. ನಮ್ಮ ಸರ್ಕಾರದ ಅವಧಿಯಲ್ಲಿಯೇ ಕಲ್ಯಾಣ ಕರ್ನಾಟಕ ಭಾಗದ ಶೇ.90ರಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ : ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯತಿಯ ಅರಿವು ಕೇಂದ್ರಗಳ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮಪಂಚಾಯತಿಗಳನ್ನು ಸಜ್ಜುಗೊಳಿಸಲಾಗಿದೆ.ಶಾಲೆಗಳಿಗೆ ಬೇಸಿಗೆ ರಜೆ ಆರಂಭಗೊಂಡಿದ್ದು, ಬೇಸಿಗೆ ರಜೆ ಅಂತ್ಯಗೊಳ್ಳುವವರೆಗೆ ಏಪ್ರಿಲ್ – ಮೇ ಮಾಹೆಯಲ್ಲಿ ಶಿಬಿರಗಳನ್ನು ಆಯೋಜಿಸಲಾಗಿದ್ದು, ಗ್ರಾಮ ಪಂಚಾಯತಿಯ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳ ಮೂಲಕ ಶಾಲೆಗಳ ಬೇಸಿಗೆ ರಜೆಯ ಸಮಯದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಶಿಬಿರದ ನಿರ್ವಹಣೆಯನ್ನು ಅರಿವು ಕೇಂದ್ರದ ಮೇಲ್ವಿಚಾರಕರು, ಗ್ರಾಮ ಪಂಚಾಯತಿ ಪುನರ್ವಸತಿ ಕಾರ್ಯಕರ್ತರು ಮತ್ತು ಗುರುತಿಸಿದ ಸ್ವಯಂ ಸೇವಕರೊಂದಿಗೆ ಪರಿಣಾಮಕಾರಿಯಾಗಿ ಆಯೋಜಿಸಲು ಕ್ರಮವಹಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ಶಿಬಿರದಲ್ಲಿ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಈ ಬೇಸಿಗೆ ಶಿಬಿರ ಅನುಕೂಲಕರವಾಗಲಿದೆ.

ಶಿಬಿರದ ಮೂಲಕ ಓದುವ, ಬರೆಯುವ, ಅಂಕಿ ಸಂಖ್ಯೆ, ವಿಜ್ಞಾನ ವಿಷಯಗಳು, ನಾಯಕತ್ವ ಮತ್ತು ಸಂವಹನ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ. ಪರಿಸರ ಮತ್ತು ಸಾಮಾಜಿಕ ಕಾಳಜಿ ಬೆಳೆಸುವುದು, ಸ್ಥಳೀಯ ಸಂಸ್ಕೃತಿ, ಜೀವನ ಶೈಲಿ, ಇತಿಹಾಸದ ಅಂಶಗಳನ್ನು ತಿಳಿಯುವಂತೆ ಅರಿವು ಮೂಡಿಸುವುದು ಹಾಗೂ ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ಬೇಸಿಗೆ ಶಿಬಿರದ ಆಶಯವಾಗಿರುತ್ತದೆ.
ವಿಜ್ಞಾನಕ್ಕೆ ಸಂಬಂಧಿಸಿದಂತೆ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ ಅಳತೆ ಮತ್ತು ಮಾಪಕಗಳು, ಟ್ಯಾಂಗ್ರಾಮ್, ಪೇಪರ್ ಫ್ಯಾನ್, ಜೆಟ್ ಪ್ಲೇನ್, ಕಣ್ಣುಮಿಟುಕಿಸುವ ಗೊಂಬೆ, ಚದುರಂಗ, ಕೇರಂ, ಆಕಾಶ ವೀಕ್ಷಣೆ ಮತ್ತಿತರೆ ಚಟುವಟಿಕೆಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳಲು ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ.

ಮಕ್ಕಳನ್ನು ಹಲವು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯೋಜಿಸಲಾಗಿದ್ದು, ಪ್ರಮುಖವಾಗಿ ನಮ್ಮೂರಿನ ಪಕ್ಷಿಗಳು, ನೀರಿನ ಪಯಣ, ನನ್ನ ಊರು, ನಮ್ಮೂರಿನ ಇತಿಹಾಸ, ನಮ್ಮೂರ ಜಾತ್ರೆ, ನಮ್ಮೂರ ಜನಪದ ಗೀತೆಗಳು-ಜನಪದ ಕಥೆ, ನಮ್ಮೂರ ಕ್ರೀಡೆಗಳು, ನಮ್ಮೂರ ಕಲೆಗಳ ಬಗ್ಗೆ ಮಕ್ಕಳಿಗೆ ಮಾಹಿತಿ ಒದಗಿಸಲಾಗುವುದು. ಸ್ಥಳೀಯ ಅಂಚೆ ಕಚೇರಿ, ಹಾಲು ಉತ್ಪಾದಕರ ಸಹಕಾರ ಸಂಘ, ಬ್ಯಾಂಕ್, ಪಶುವೈದ್ಯಕೀಯ ಆಸ್ಪತ್ರೆ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತಿ, ಆಸ್ಪತ್ರೆ ಮುಂತಾದ ಸ್ಥಳಗಳಿಗೆ ಮಕ್ಕಳನ್ನು ಕರೆದೊಯ್ದು ಮಕ್ಕಳಿಗೆ ಪರಿಚಯ ಮಾಡಿಸುವುದು ಮೂಲ ಉದ್ದೇಶವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read