ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಆರೋಪ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕರಾದ ಸ್ಯಾಮ್ ಪಿತ್ರೋಡಾ, ಸುಮನ್ ದುಬೆ ಅವರ ಹೆಸರೂ ಇದೆ ಎನ್ನಲಾಗಿದೆ.
ಇನ್ನು ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಏಪ್ರಿಲ್ 25ಕ್ಕೆ ಮುಂದೂಡಿದೆ.