ಬೆಂಗಳೂರು : ಬೆಂಗಳೂರಲ್ಲಿ ‘ನಮ್ಮ ಮೆಟ್ರೋ’ ಎಡವಟ್ಟಿಗೆ ಮತ್ತೊಂದು ಬಲಿಯಾಗಿದ್ದು, ವಯಾಡೆಕ್ಟ್ ಉರುಳಿ ಬಿದ್ದು ಸ್ಥಳದಲ್ಲೇ ಆಟೋ ಚಾಲಕ ಮೃತಪಟ್ಟ ಘಟನೆ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಖಾಸಿಂ ಸಾಬ್ ಎಂದು ಗುರುತಿಸಲಾಗಿದೆ. ನಿನ್ನೆ ತಡರಾತ್ರಿ 12:30 ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಆಟೋದಲ್ಲಿದ್ದ ಪ್ಯಾಸೆಂಜರ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರೆ, ಚಾಲಕ ಖಾಸಿಂ ಸಾಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಏರ್ ಪೋರ್ಟ್ ಮಾರ್ಗದ ಮೆಟ್ರೋ ಕಾಮಗಾರಿಗಾಗಿ 18 ಚಕ್ರದ ದೊಡ್ಡ ಲಾರಿಯಲ್ಲಿ ವಯಾಡೆಕ್ಟ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಆದರೆ ಕೋಗಿಲು ಕ್ರಾಸ್ ನಲ್ಲಿ ತಿರುವು ತೆಗೆದುಕೊಳ್ಳುವಾಗ ಲಾರಿಯೇ 2 ತುಂಡಾಗಿದೆ. ಪರಿಣಾಮ ವಯಾಡೆಕ್ಟ್ ಉರುಳಿಬಿದ್ದು ಪಕ್ಕದಲ್ಲೇ ಇದ್ದ ಆಟೋ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಪ್ರಯಾಣಿಕ ತಕ್ಷಣ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಆಟೋ ಅಪ್ಪಚ್ಚಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.