ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಾಲಕಿಯ ರೇಪ್ & ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಕೌಂಟರ್ ಆದ ಹಂತಕನ ಫೋಟೋ ಬಿಡುಗಡೆ ಮಾಡಲಾಗಿದೆ.
5 ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದ ಆರೋಪಿ ರಿತೇಶ್ ಕುಮಾರ್ ಪೊಲೀಸರ ಗುಂಡೇಟೆಗೆ ಬಲಿಯಾಗಿದ್ದಾನೆ. ಎದೆಗೆ ಗುಂಡು ತಗುಲಿದ್ದರಿಂದ ಆರೋಪಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ. ಪೊಲೀಸರ ಗುಂಡೇಟಿಗೆ ಬಿಹಾರ ಮೂಲದ ರಿತೇಶ್ ಕುಮಾರ್ ಬಲಿಯಾಗಿದ್ದಾನೆ.
ಹುಬ್ಬಳ್ಳಿಯಲ್ಲಿ ಬಾಲಕಿ ಹತ್ಯೆಗೈದ ಆರೋಪಿ ‘ಎನ್ ಕೌಂಟರ್’ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದ್ದು, ನಾಳೆ ಅಥವಾ ನಾಡಿದ್ದು ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ.
ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದ ಆರೋಪಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದರು.ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಮುಂದಾಗಿದ್ದ ವೇಳೆ ಫೈರಿಂಗ್ ಮಾಡಲಾಗಿತ್ತು. ಎದೆಗೆ ಗುಂಡು ತಗುಲಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ.
35 ವರ್ಷದ ರಿತೇಶ್ ಕುಮಾರ್ ಹಲವಾರು ತಿಂಗಳಿನಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದ. ದೃಶ್ಯಗಳನ್ನು ಆಧರಿಸಿ ತನಿಖೆ ನಡೆಸಲಾಗಿತ್ತು. ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್ಐ ಅನ್ನಪೂರ್ಣ ಅವರು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಪಿಎಸ್ಐ ಅನ್ನಪೂರ್ಣ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.