BREAKING NEWS: 1ನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: 1ನೇ ತರಗತಿ ಸೇರ್ಪಡೆಗೆ 6 ವರ್ಷ ಕಡ್ಡಾಯವಲ್ಲ. ವಯೋಮಿತಿ ಸಡಿಲಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, 1ನೇ ತರಗತಿಗೆ ದಾಖಲಾಗಲು ವಯೋಮಿತಿ ಸಡಿಲಿಸಲಾಗಿದೆ. ಈ ವರ್ಷ 5 ವರ್ಷ 5 ತಿಂಗಳಾಗಿದ್ದರೂ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.

ಪೋಷಕರ ಬೇಡಿಕೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ವರ್ಷದಿಂದ ಯಥಾ ಪ್ರಕಾರ 6 ವರ್ಷ ಕಡ್ಡಾಯವಿರಲಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read