HomeLive NewsBIG NEWS: ಮೆಟ್ರೋ ವಯಾಡೆಕ್ಟ್ ಬಿದ್ದು ಆಟೋ ಚಾಲಕ ಸಾವು ಪ್ರಕರಣ: ಮೂವರ ವಿರುದ್ಧ FIR...

BIG NEWS: ಮೆಟ್ರೋ ವಯಾಡೆಕ್ಟ್ ಬಿದ್ದು ಆಟೋ ಚಾಲಕ ಸಾವು ಪ್ರಕರಣ: ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಮೆಟ್ರೋ ಕಾಮಗಾರಿ ನಡೆಸುತ್ತಿದ್ದ ವೇಳೆ ಮೆಟ್ರೋಗೆ ಬಳಸುವ ವಯಾಡೆಕ್ಟ್ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮೃತನ ಮಾವ ಸೈಯದ್ ಖಾದರ್ ದೂರು ಆಧರಿಸಿ ಲಾರಿ ಚಾಲಕ, ಎನ್ ಸಿಸಿ ಕಂಪನಿ ಮ್ಯಾನೇಜರ್ ಹಾಗೂ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಲಹಂಕದ ಕೋಗಿಲು ಕ್ರಾಸ್ ಬಳಿ ಆಟೋ ಚಾಲಕ ಖಾಸಿಂ ಸಾಬ್ ಮೇಲೆ ಲಾರಿಯಲ್ಲಿ ಸಾಗಿಸುತ್ತಿದ್ದ ಮೆಟ್ರೋ ವಯಡೆಕ್ಟ್ ಬಿದ್ದು ಆಟೋಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದರು. ೨೦ ದಿನಗಳ ಹಿಂದಷ್ಟೇ ಸಾಲ ಮಾಡಿ ಖರೀದಿಸಿದ್ದ ಹೊಸ ಆಟೋ ಸಂಪೂರ್ಣ ಅಪ್ಪಚ್ಚಿಯಾಗಿದೆ. ಪ್ರಕರಣ ಸಂಬಂಧ ಇದೀಗ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular