ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಪೂರ್ಣ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ ಯಾವುದೇ ನೇಮಕಾತಿ ಮಾಡುವಂತಿಲ್ಲ ಎಂದು ಮಧ್ಯಂತರ ಆದೇಶ ಹೊರದಿಸಿದೆ.
ವಕ್ಫ್ ತಿದ್ದುಪಡಿ ಕಾಯ್ದೆಯಡಿ ಯಾವುದೇ ನೇಮಕಾತಿ ಮಾಡುವಂತಿಲ್ಲ. ಮುಂದಿನ ವಿಚಾರಣೆ ಮುಗಿಯುವವರೆಗೂ ಹೊಸ ತಿದ್ದುಪಡಿ ಕಾಯ್ದೆಯಡಿ ವಕ್ಫ್ ಮಂಡಳಿಗೆ ಯಾವುದೇ ನೇಮಕಾತಿ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಕೇಂದ್ರ ಸರ್ಕಾರ ಏಳು ದಿನಗಳ ಒಳಗಾಗಿ ಉತ್ತರ ನೀಡಬೇಕು. ಸಂಬಂಧಿಸಿದ ದಾಖಲೆ ಸಲ್ಲಿಸಲು ವಾರದೊಳಗೆ ಪ್ರತಿಕ್ರಿಯೆ ನೀಡಬೇಕು ಎಂದು ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಮೇ 5ಕ್ಕೆ ಮುಂದೂಡಲಾಗಿದೆ.
ಮುಂದಿನ ವಿಚಾರಣೆಯಲ್ಲಿ 5 ಅರ್ಜಿದಾರರ ವಾದ ಆಲಿಸುತ್ತೇವೆ. 5 ಅರ್ಜಿದಾರರು ಯಾರು ಎಂದು ನೀವೇ ಆಯ್ಕೆ ಮಾಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ