ಮಂಗಳೂರು: ಮಂಗಳೂರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ನಿರ್ಜನ ಪ್ರದೇಶದಲ್ಲಿ ಹೊರರಾಜ್ಯದ ಯುವತಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಯುವತಿಯ ಮೈಮೇಲೆ ಗಾಯಗಳಾಗಿದ್ದು, ತಡರಾತ್ರಿ ನಶೆಯಲ್ಲಿ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣೆ ಪೊಲೀಸರು ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿನ್ನೆ ತಡರತರಿ ನಾಲ್ವರ ತಂಡ ಕಲ್ಲಾಪು ಬಳಿ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಯುವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನಷ್ಟೇ ಘಟನೆ ಬಗ್ಗೆ ನಿಖರ ಮಾಹಿತಿ ಲಭ್ಯವಾಗಬೇಕಿದೆ.