HomeLatest NewsBREAKING NEWS: ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಬಾಲಕ ಬಲಿ

BREAKING NEWS: ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಬಾಲಕ ಬಲಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಶಂಕಿತ ಮಂಗನ ಕಾಯಿಲೆಗೆ ಬಾಲಕ ಬಲಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿಯ ದತ್ತರಾಜಪುರದಲ್ಲಿ ಈ ಘಟನೆ ನಡೆದಿದೆ.

ದತ್ತರಾಜಪುರದ 8 ವರ್ಷದ ರಚಿತ್ ಮೃತ ಬಾಲಕ. 15 ದಿನಗಳ ಹಿಂದೆ ರಚಿತ್ ಹಾಗೂ ಸಹೋದರಿಗೆ ಮಂಗನ ಕಾಯಿಲೆ ಸೋಂಕು ದೃಢಪಟ್ಟಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರನ್ನೂ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡು ರಚಿತ್ ಸಹೋದರಿ ಆಸ್ಪತ್ರೆಯಿಂದ ಡಿಸ್ಚಾರ್ಗ್ ಆಗಿದ್ದಳು. ಆದರೆ ರಚಿತ್ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರತರಿ 8:30ರ ಸುಮಾರಿಗೆ ರಚಿತ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

ಮಗನನ್ನು ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular