ಕೊಡಗು: ಲಾರಿ-ಕಾರು ನಡುವೆ ಸಮ್ಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಪೊನ್ನಂಪೇಟೆ ತಾಲೂಕಿನ ಹೂತೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬಿ.ಶೆಟ್ಟಿಗೇರಿ ಗ್ರಾಮದ ಅರ್ಚಕ ಸುಚೇಂದ್ರ ಹಾಗೂ ತಾಯಿ ಲಲಿತಾ ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಗೋಣಿಕೊಪ್ಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.