ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಇತ್ತೀಚೆಗೆ ಹೊನ್ನಾವರದಲ್ಲಿ ಹಸ್ವನ್ನು ಕಡಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇದೋಗ ಭಟ್ಕಳದಲ್ಲಿ ಗರ್ಭಧರಿಸಿದ್ದ ಗೋವನ್ನು ಹತ್ಯೆಗೈದಿರುವ ಘಟನೆ ನಡೆದಿದೆ.
ಭಟ್ಕಳ ತಾಲೂಕಿನ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ಗರ್ಭಧರಿಸಿದ್ದ ಹಸುವನ್ನು ಹತ್ಯೆ ಮಾಡಿ ಮಾಂಸ ಸಾಗಾಟ ಮಾಡಿದ್ದಾರೆ ದುಷ್ಕರ್ಮಿಗಳು. ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಭ್ರೂಣವನ್ನು ಗೋಣಿ ಚೀಲದಲ್ಲಿ ಸುತ್ತಿ ಎಸೆದು ಹೋಗಿದ್ದಾರೆ.
ಬೀದಿನಾಯಿಯೊಂದು ಚೀಲವನ್ನು ಎಳೆದು ತಂದಿದ್ದು, ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಭಟ್ಕಳ ಗ್ರಾಮೀಣ ಥಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ.

 
			 
		 
		 
		 
		 Loading ...
 Loading ... 
		 
		