HomeLatest NewsGOOD NEWS : ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : 'ವಿದ್ಯಾಸಿರಿ' ಮೊತ್ತ...

GOOD NEWS : ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ವಿದ್ಯಾಸಿರಿ’ ಮೊತ್ತ 2000 ರೂ.ಗೆ ಹೆಚ್ಚಳ.!

ಬೆಂಗಳೂರು : ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶ್ರೀ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ಟ್ರಸ್ಟ್ ನವರು ಕೆಂಗೇರಿಯ ಚೂಡೇನಪುರದಲ್ಲಿ ನಿರ್ಮಿಸಿರುವ ಕಲಿದೇವ ಕನ್ವೆಷ್ನನ್ ಹಾಲ್ ಅನ್ನು ಲೋಕಾರ್ಪಣೆಗೊಳಿಸಿ, ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮಡಿವಾಳ ಸಮುದಾಯದ ಪ್ರಗತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ಈ ಸಮುದಾಯದಿಂದ ಹೆಚ್ಚೆಚ್ಚು ಆಗಬೇಕು. 12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಸಾಮಾಜಿಕ ಅಸಮಾನತೆ ಹೆಚ್ಚಾಯಿತು. ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದರು. ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು. ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ ಐಎಎಸ್ ಅಧಿಕಾರಿ ಇದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ. ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು. ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular