ಚಿಕ್ಕಮಗಳೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ನೊಂದು ಕೆ.ಎಸ್.ಆರ‍್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ಚಂದ್ರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕ. ಮೇಲಾಧಿಕಾರಿ ಪುಟ್ಟಸ್ವಾಮಿ ಎಂಬುವವರ ವಿರುದ್ಧ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಅನಾರೋಗ್ಯದ ಕಾರಣಕ್ಕೆ ಕೆಲಸಕ್ಕೆ ರಜೆ ಹಾಕಿದ್ದರಂತೆ. ಅಲ್ಲದೇ ಚಂದ್ರು ಅವರ ಹಲವು ರಜೆ ಬಾಕಿ ಇತ್ತಂತೆ. ಆದಾಗ್ಯೂ ಪುಟ್ಟಸ್ವಾಮಿ ಕಿರುಕುಳ ನೀಡುತ್ತಿದ್ದರಂತೆ ಹಣ ಕೊಟ್ಟವರಿಗೆ ಎಷ್ಟು ಬೇಕಾದರೂ ರಜೆ ಮಂಜೂರು ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.