HomeLatest Newsಮಂಗನ ಕಾಯಿಲೆಗೆ ಬಾಲಕ ಬಲಿ ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚನೆ

ಮಂಗನ ಕಾಯಿಲೆಗೆ ಬಾಲಕ ಬಲಿ ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರದಲ್ಲಿ 8 ವರ್ಷದ ಬಾಲಕ ರಚತ್ ಮಂಗನ ಕಾಯಿಲೆಗೆ ಬಲಿಯಾಗಿದ್ದಾನೆ. ಈ ಮೂಲಕ ಈ ವರ್ಷ ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ.

ಬಾಲಕನ ಸಾವಿನ ಬಗ್ಗೆ ಒಂದು ವಾರದೊಳಗೆ ವರದಿ ನೀಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ಉಲ್ಭಣಗೊಳ್ಳುತ್ತಿದ್ದು, ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹರಸಾಹಸಪಡುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular