ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ, ಉದ್ಯಮಿ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಅಟ್ಯಾಕ್ ಆಗಿರುವ ವಿಚಾರ ಗೊತ್ತಾಗಿದೆ. ತಡರಾತ್ರಿ ದಾಳಿಯಾಗಿದೆ. ಪೊಲೀಸರಿಂದ ಹೆಚ್ಚಿನ ಮಾಹಿತಿ ಕೇಳಿದ್ದೇನೆ. ಗುಂಡಿನ ದಾಳಿಯಿಂದ ಗಾಯಗೊಂಡಿರುವ ರಿಕ್ಕಿ ರೈ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಔಟ್ ಆಫ್ ಡೇಂಜರ್ ಎಂದು ಹೇಳಿದ್ದಾರೆ ಎಂದು ತಿಳಿಸಿದರು.
ರಿಕ್ಕಿ ರೈ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಂಡಿನ ದಾಳಿಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.