ಬೆಂಗಳೂರು : ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅನಾರೋಗ್ಯ ಸುದ್ದಿ ವದಂತಿ ಅಷ್ಟೇ, ಅವರು ಆರೋಗ್ಯವಾಗಿದ್ದಾರೆ ಎಂದು ಹೆಚ್ ಡಿ ಕುಮಾರಸ್ವಾಮಿ ಅವರ ಮಾಧ್ಯಮ ಕಾರ್ಯದರ್ಶಿ ಚನ್ನಕೃಷ್ಣ ಮಾಹಿತಿ ನೀಡಿದ್ದಾರೆ.
ಈ ಕುರಿತು ‘ಕನ್ನಡ ದುನಿಯಾ’ ಡಿಜಿಟಲ್ ಮೀಡಿಯಾದ ಜೊತೆ ಮಾತನಾಡಿದ ಹೆಚ್ಡಿಕೆ ಅವರ ಮಾಧ್ಯಮ ಕಾರ್ಯದರ್ಶಿ ಚನ್ನಕೃಷ್ಣ’ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ.. ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಎದುರಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಹೆಚ್ .ಡಿ ಕುಮಾಸ್ವಾಮಿ ಅವರು ಅನಾರೋಗ್ಯದ ಹಿನ್ನೆಲೆ ವಿದೇಶಕ್ಕೆ ತೆರಳಲಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈ ಹಿನ್ನೆಲೆ ಚನ್ನಕೃಷ್ಣ ಅವರು ಸ್ಪಷ್ಟನೆ ನೀಡಿದ್ದಾರೆ.
You Might Also Like
TAGGED:H.D ಕುಮಾರಸ್ವಾಮಿ