ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. 25 ವರ್ಷದ ಸ್ವಾತಿ ಮೃತಪಟ್ಟ ಬಾಣಂತಿ ಎಂದು ಹೇಳಲಾಗಿದೆ.
ವಾಣಿವಿಲಾಸ ಆಸ್ಪತ್ರೆಯ ವೈದ್ಯರ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಹೆರಿಗೆಗಾಗಿ ಸ್ವಾತಿ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ನಾರ್ಮಲ್ ಡೆಲಿವರಿ ಆಗುತ್ತದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ನಂತರ ಸಿಸೇರಿಯನ್ ಮಾಡಬೇಕೆಂದು ವೈದ್ಯರು ಹೇಳಿ ಸಿಸೇರಿಯನ್ ಮಾಡಿ ಮಗುವನ್ನು ಹೊರಗೆ ತೆಗೆದಿದ್ದಾರೆ
ಸಿಸೇರಿಯನ್ ವೇಳೆ ಸ್ವಾತಿಯ ಕರುಳಿಗೆ ಡ್ಯಾಮೇಜ್ ಆಗಿದ್ದು, ಅದನ್ನು ಸರಿಪಡಿಸುವ ಪ್ರಯತ್ನ ನಡೆದಿದೆ. ಆರು ದಿನ ನೋವು ತಿಂದು ಸ್ವಾತಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಸ್ವಾತಿ ಬಲಿಯಾಗಿದ್ದಾರೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.