HomeLatest NewsBREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ: ತಪ್ಪಿದ ಭಾರೀ...

BREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ: ತಪ್ಪಿದ ಭಾರೀ ದುರಂತ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದೆ.

ಇಂಜಿನ್ ರಿಪೇರಿಯಿಂದಾಗಿ ವಿಮಾನ ಕೆಟ್ಟು ನಿಂತಿತ್ತು. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರೀ ದುರಂತ ತಪ್ಪಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಬ್ಬಸಕ್ಕೆ ಟಿಟಿ ವಾಹನದ ಟಾಪ್ ನಚ್ಚುಗುಜ್ಜಾಗಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಟಿಟಿ ಚಾಲಕ ಪಾರಾಗಿದ್ದಾರೆ.

ಕೆಲವು ದಿನಗಳಿಂದ ಇಂಡಿಗೋ ವಿಮಾನ ಕೆಟ್ಟ ನಿಂತಿತ್ತು. ಚಾಲಕನ ಅಜಾಗರೂಕತೆಯಿಂದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ವಿಮಾನಕ್ಕೆ ಸಿಬ್ಬಂದಿಯನ್ನು ಟಿಟಿ ವಾಹನ ಕರೆದೊಯ್ಯುವ ವೇಳೆ ಘಟನೆ ನಡೆದಿದೆ. ಸಿಬ್ಬಂದಿ ಬಿಟ್ಟು ಬರುವಾಗ ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದೆ. ಘಟನೆಯ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆಯಿಂದ ತನಿಖೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular