ಬೆಂಗಳೂರು: ಬೆಂಗಳೂರುನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಇದೇ ವೇಳೆ ರನ್ ವೇ ನಲ್ಲಿರುವ ಕಂಬಕ್ಕೆ ಕಾರೊಂದು ಗುದ್ದಿದೆ.
ಇಂಜಿನ್ ರಿಪೇರಿಯಿಂದಾಗಿ ಕೆಟ್ಟು ನಿಂತಿದ್ದ ವಿಮನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಟಿಟಿ ವಾಹನದ ಟಾಪ್ ನುಜ್ಜುಗುಜ್ಜಾಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಟಿಟಿ ವಾಹನ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಕೆಲ ದಿನಗಳಿಂದ ಇಂಡಿಗೋ ವಿಮಾನವೊಂದು ಕೆಟ್ಟು ನಿಂತಿತ್ತು. ವಿಮಾನಕ್ಕೆ ಸಿಬ್ಬಂದಿಗಳನ್ನು ಬಿಟ್ಟು ವಾಪಾಸ್ ಆಗುತ್ತಿದ್ದ ಟಿಟಿ ವಾಹನ ಕೆಟ್ಟು ನಿಂತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆ ಬಗ್ಗೆ ನಾಗರಿಕ ವಿಮಾನ ಯಾನ ಸಂಸ್ಥೆ ತನಿಖೆಗೆ ಆದೇಶಿಸಿದೆ.