ಬೀದರ್: ಜನಿವಾರ ತೆಗೆಯದ್ದಕ್ಕೆ ಸಿಇಟಿ ಪರೀಕ್ಷೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ವಿದ್ಯಾರ್ಥಿ ಸಿಇಟಿ ಪರೀಕ್ಷೆಯಿಂದಲೇ ವಂಚಿತನಾಗಿದ್ದು, ವಿದ್ಯಾರ್ಥಿಗೆ ನ್ಯಾಯ ಕೊಡಿಸುವಂತೆ ಆಗ್ರಹಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ.
ಸಿಇಟಿ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿ ಸುಚಿವೃತ ಕಲಕರ್ಣಿ ಮನೆಗೆ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್ ಭೇಟಿ ನೀಡಿದ್ದಾರೆ. ಬೀದರ್ ನ ಓಲ್ಡ್ ಸಿಟಿಯಲ್ಲಿರುವ ಸುಚಿವೃತ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿರುವ ಸಚಿವರು ಉಚಿತ ಸೀಟ್ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ಭೀಮಣ್ಣ ಖಂಡ್ರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಚಿವೃತ ಕುಲಕರ್ಣಿಗೆ ಉಚಿತ ಸೀಟು ಕೊಡಿಸುವುದಾಗಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿ, ಧೈರ್ಯ ತುಂಬಿದ್ದಾರೆ.