ಕಲಬುರಗಿ: ಲಿವಿಂಗ್ ಟುಗೆದರ್ ಗೆ ಮನೆಯವರು ವಿರೋಧಿಸಿದ್ದಕ್ಕೆ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ನಾಗನಹಳ್ಳಿ ಬಳಿ ನಡೆದಿದೆ.
ಶಿವಕುಮಾರ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೂ ಮುನ್ನ ಲಿವಿಂಗ್ ನಲ್ಲಿದ್ದ ಮಹಿಳೆಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ. ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ್ದ ಮಹಿಳೆ ಯುವಕನ ರಕ್ಷಣೆಗೆ ಮುಂದಾಗಿದ್ದಾರೆ. ಆದರೂ ಆತನನ್ನು ರಕ್ಷಿಸಲು ಸಾಧ್ಯವಾಗಿಲ್ಲ. ರಕ್ಷಿಸಲು ಹೋಗಿದ್ದ ಮಹಿಳೆಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.