ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರ ಈಗ ಅಪ್ರಸ್ತುತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಲ್ಲ. ಸ್ವಾಮೀಜಿಗಳು ಅವರ ಅಭಿಪ್ರಾಯ ತಿಳಿಸಿದ್ದಾರೆ ಎಂದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದ ವಿಚಾರವಾಗಿ, ಒಂದಿಷ್ಟು ಸತ್ಯ ಹೇಳಿದರೆ ಹೊಗಳುವುದು ಏನುಬಂತು? ಸಿದ್ದರಾಮಯ ಅವರು 16 ಬಜೆಟ್ ಕೊಟ್ಟಿದ್ದು ಸತ್ಯವಲ್ಲವ್ರೇ? ಅವರು ರಾಜ್ಯದಲ್ಲಿ ಆರ್ಥಿಕ ಸಮನ್ವಯತೆ ಸಾಧಿಸಿದ್ದಾರೆ. ಅದನ್ನು ಹೊಗಳಿಕೆ ಅಂದುಕೊಂಡರೆ ಅಂದುಕೊಳ್ಳಲಿ ಎಂದರು.