ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ (68) ಅವರನ್ನು ಪತ್ನಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಿವಾಸದಲ್ಲಿ ಪತ್ನಿ ಪಲ್ಲವಿ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಎಂದು ಆರೋಪಿಸಲಾಗಿದೆ. ಆಸ್ತಿ ವಿಚಾರವಾಗಿ ಪತಿ-ಪತ್ನಿ ನಡಿವೆ ಹಲವು ದಿನಗಳಿಂದ ಮನಸ್ತಾಪವುಂಟಾಗಿತ್ತು. ಇದೇ ಕಾರಣಕ್ಕೆ ಕೆಲ ದಿನಗಳ ಹಿಂದಷ್ಟೇ ಪತ್ನಿ ಪಲ್ಲವಿ ಮನೆ ಮುಂದೆ ಧರಣಿ ನಡೆಸಿದ್ದರು. ಈ ಬಗ್ಗೆ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಪತ್ನಿ ಪಲ್ಲವಿ ಓಂ ಪ್ರಕಾಶ್ ಅವರನ್ನು ಮನೆಯ ಮೊದಲ ಮಹಡಿಯಲ್ಲಿಯೇ ಬರ್ಬರವಾಗಿ ಹತ್ಯೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮನೆಯ ಮೊದಲ ಮಹಡಿಯಲ್ಲಿ ನಿವೃತ್ತ ಡಿಜಿ-ಐಜಿಪಿ ಶವವಾಗಿ ಪತ್ತೆಯಾಗಿದ್ದಾರೆ. ಪತ್ನಿ ಪಲ್ಲವಿಯೇ ಅವರನ್ನು ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಓಂ ಪ್ರಕಾಶ್ ಹಾಗೂ ಪಲವಿಗೆ ಇಬ್ಬರು ಮಕ್ಕಳಿದ್ದರು. ದಾಂಡೆಲಿಯಲ್ಲಿನ ಆಸ್ತಿಯನ್ನು ಓಂ ಪ್ರಕಾಶ್ ತನ್ನ ಸಹೋದರಿ ಹೆಸರಿಗೆ ಮಾಡಿದ್ದರು. ಇದೇ ವಿಚಾರವಾಗಿ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು ಆಗಾಗಾ ಮನೆಯಲ್ಲಿ ಗಾಲಾಟೆಯು ನಡೆಯುತ್ತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
2015ರಲ್ಲಿ ಓಂ ಪ್ರಕಾಶ್ ಕರ್ನಾಟಕದ ಐಜಿ-ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದರು.