HomeLatest Newsಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸಿದರೆ ಶಿಕ್ಷೆ: ಡಿಸಿಎಂ ಡಿ.ಕೆ. ಶಿವಕುಮಾರ್

ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸಿದರೆ ಶಿಕ್ಷೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು: ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸಿದರೆ ಶಿಕ್ಷೆ ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಜನಿವಾರ ಪ್ರಕರಣ ಕುರಿತಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ, ಧರ್ಮಾಚಾರಣೆಗೆ ಯಾರೂ ಅಡ್ಡಿಪಡಿಸುವಂತಿಲ್ಲ. ಹಿರಿಯರು ಮಾಡಿರುವ ಆಚರಣೆಗಳಿಗೆ ಅಡ್ಡಿ ಮಾಡಿದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಸರ್ಕಾರ ಬದ್ಧವಾಗಿದೆ. ಆಚರಣೆಗಳನ್ನು ಅನುಸರಿಸಲು ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ಮುಕ್ತ ಅವಕಾಶ ನೀಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಧರ್ಮ, ಧರ್ಮಾಚರಣೆ ಉಳಿಸಲು ಸರ್ಕಾರ ಬದ್ಧವಾಗಿದ್ದು, ಇದನ್ನು ಶೃಂಗೇರಿ ಶ್ರೀಗಳ ಪಾದಾರವಿಂದಗಳಲ್ಲಿ ಹೇಳುತ್ತಿದ್ದೇನೆ ಎಂದು ಡಿಸಿಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular