HomeLatest NewsGOOD NEWS: ‘ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ’ಯಡಿ ಸಹಾಯಧನಕ್ಕೆ ಅರ್ಜಿ

GOOD NEWS: ‘ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ’ಯಡಿ ಸಹಾಯಧನಕ್ಕೆ ಅರ್ಜಿ

ಮೀನುಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನ ಮತ್ತು ಹಿಂದಿನ ಸಾಲಿನಲ್ಲಿ ಅನುಷ್ಠಾನವಾಗದೇ ಬಾಕಿ ಉಳಿದ ಗುರಿಗಳಿಗೆ ಫಲಾನುಭವಿ ಆಧಾರಿತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಹೊಸ ಸಿಹಿನೀರಿನ ಫಿನ್‌ಫಿಶ್ ಮೊಟ್ಟೆ ಕೇಂದ್ರಗಳ ಸ್ಥಾಪನೆ, ಲವಣಯುಕ್ತ/ಕ್ಷಾರೀಯ ಪ್ರದೇಶಗಳಿಗೆ ಹೊಸ ಕೊಳದ ನಿರ್ಮಾಣ, ಹೊಸ ಬೆಳೆಯುವ ಕೊಳ, ಲವಣಯುಕ್ತ, ಸೌಮ್ಯ, ಕ್ಷಾರೀಯಕ್ಕಾಗಿ ಬಯೋಫ್ಲಾಕ್ ಕೊಳಗಳ ನಿರ್ಮಾಣ ಮತ್ತು ದಿನಕ್ಕೆ 2 ಟನ್ ಉತ್ಪಾದನಾ ಸಾಮರ್ಥ್ಯದ ಮಿನಿ ಫೀಡ್ ಗಿರಣಿಗಳು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.60ರಷ್ಟು ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.40 ರಂತೆ ಸಹಾಯಧನ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಮೇ 03 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಸಂಬAಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೂ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ- ಮೊ.9449593156, ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಬಳ್ಳಾರಿ-ಮೊ.7406508971 ಮತ್ತು ಸಂಡೂರು ಮೊ.7204911897 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular