HomeLatest NewsBREAKING: HSR ಲೇಔಟ್ ಟೆನ್ನಿಸ್ ಕೋರ್ಟ್ ನಲ್ಲಿ ಮೃತ ನಿವೃತ್ತ ಐಜಿಪಿ ಓಂ ಪ್ರಕಾಶ್ ಅಂತಿಮ...

BREAKING: HSR ಲೇಔಟ್ ಟೆನ್ನಿಸ್ ಕೋರ್ಟ್ ನಲ್ಲಿ ಮೃತ ನಿವೃತ್ತ ಐಜಿಪಿ ಓಂ ಪ್ರಕಾಶ್ ಅಂತಿಮ ದರ್ಶನಕ್ಕೆ ಸಿದ್ಧತೆ: ಮಧ್ಯಾಹ್ನ 3ಗಂಟೆಗೆ ಅಂತ್ಯಕ್ರಿಯೆ

ಬೆಂಗಳೂರು: ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಐಜಿಪಿ ಓಂ ಪ್ರಕಾಶ್ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಈಗಾಗಲೇ ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು, ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಮೃತದೇಹವನ್ನು ಹೆಚ್.ಎಸ್.ಆರ್.ಲೇಔಟ್ ಗೆ ತರಲಾಗುತ್ತಿದೆ.

ಹೆಚ್.ಎಸ್.ಆರ್.ಲೇಔಟ್ ನ ಟೆನ್ನಿಸ್ ಕೋರ್ಟ್ ನಲ್ಲಿ ಪಾರ್ಥಿವಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಂಸಿಹೆಚ್ ಎಸ್ ಕ್ಲಬ್ ನಲ್ಲಿಯೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಮಾಧ್ಯಾಹ್ನ 3 ಗಂಟೆಗೆ ವಿಲ್ಸನ್ ಗಾರ್ಡನ್ ನಲ್ಲಿ ಎಲೆಕ್ಟ್ರಿಕ್ ಕ್ರಿಮಿಟೋರಿಯಂ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಕೌಟುಂಬಿಕ ಕಲಹಕ್ಕೆ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹತ್ಯೆ ಬಳಿಕ ಸ್ವತಃ ಪೊಲೀಸರಿಗೆ ಕರೆ ಮಾಡಿ ಪತ್ನಿ ಮಾಹಿತಿ ನೀಡಿದ್ದರು. ಆರೋಪಿಗಳಾದ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular