ಕೊರಟಗೆರೆ: ಚಲಿಸುತ್ತಿದ್ದ ಬೈಕ್ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಚೀಲಗಾನಹಳ್ಳಿಯಲ್ಲಿ ನಡೆದಿದೆ.
ಯೋಗೀಶ್ (42) ಮೃತ ವ್ಯಕ್ತಿ. ಬೈಕ್ ನ ಹಿಂಬದಿ ಕುಳಿತಿದ್ದ ನರಸಿಂಹ ರಾಜು ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯೋಗೀಶ್ ಹಾಗೂ ನರಸಿಂಹರಾಜು ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಊರಿಗೆ ಮರಳಲು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಿರುಗಾಳಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬೈಕ್ ಮೇಲೆ ಬಿದ್ದಿದ್ದು, ವಿದ್ಯುತ್ ಪ್ರವಹಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.