ಬೆಂಗಳೂರು: ಜಾತಿ ಗಣತಿ ವರದಿಯ ಮೂಲ ಪ್ರತಿ ನಾಪತ್ತೆಯಾಗಿದೆ ಎಂಬ ರಾಜ್ಯ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಜೆಪಿಯವರು ಎಲ್ಲಾ ವಿಷಯಗಳಲ್ಲಿಯೂ ಆರೋಪ ಮಾಡುತ್ತಿದ್ದಾರೆ. ಸರ್ಕಾರದ ಬಗ್ಗೆ ಸಕಾರಾತ್ಮಕ ಟೀಕೆ ಮಾಡುವಂತೆ ಹೇಳುತ್ತೇವೆ. ಆದರೆ ಅವರು ಅನವಶ್ಯಕ ಆರೋಪ ಮಾಡುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.
ಜಾತಿಗಣತಿ ಮೂಲಪ್ರತಿ ಇಲ್ಲದೇ ವರದಿ ಸಿದ್ಧಪಡಿಸಲು ಹೇಗೆ ಸಾಧ್ಯ? ಕ್ಯಾಬಿನೆಟ್ ನಲ್ಲಿ ಚರ್ಚಿಸುವಾಗ ಬಿಜೆಪಿ ಆರ್ಪಗಾ ಬಗ್ಗೆಯೂ ಗಮನಿಸುತ್ತೇವೆ. ಇದು ಗಂಭೀರವಾದ ಆರೋಪವಾಗಿರುವುದರಿಂದ ಈ ಬಗ್ಗೆ ಚರ್ಚಿಸಲಾಗುವುದು ಎಂದರು.