ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾಅರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ರೀತಿ ಮಾಡಿದ್ದು ಸರಿಯಲ್ಲ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ನಿಯಮಬಾಹಿರ. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು. ಹೀಗೆ ಅನವಶ್ಯಕವಾಗಿ ಧಾರ್ಮಿಕ ನಂಬಿಕೆಗಳ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು ಎಂದರು.
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ತಪ್ಪು ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.