ಕೃಷಿ ಕಾರ್ಮಿಕರ ಕೊರತೆಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಇದನ್ನು ನಿವಾರಿಸಲು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕಬ್ಬು ಕಟಾವು ಯಂತ್ರಗಳು ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ 40 ಲಕ್ಷ ರೂ. ಮತ್ತು ಪರಿಶಿಷ್ಟ ರೈತರಿಗೆ ಗರಿಷ್ಠ 50 ಲಕ್ಷ ರೂ. ರಿಯಾಯಿತಿ ಸಿಗುತ್ತಿದೆ. ಇದು ದೇಶದಲ್ಲೇ ಮೊದಲು. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಯಂತ್ರೋಪಕರಣ ವಿತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.