HomeLatest NewsBREAKING: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಆರೋಪಿ ಪಲ್ಲವಿಗೆ 14 ದಿನ ನ್ಯಾಯಾಂಗ ಬಂಧನ:...

BREAKING: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಆರೋಪಿ ಪಲ್ಲವಿಗೆ 14 ದಿನ ನ್ಯಾಯಾಂಗ ಬಂಧನ: ಜೈಲು ಪಾಲಾದ ಪತ್ನಿ, ಆಸ್ಪತ್ರೆ ಸೇರಿದ ಪುತ್ರಿ

ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪಲ್ಲವಿಗೆ ಬೆಂಗಳೂರಿನ 31ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

ಈ ಹಿನ್ನಲೆಯಲ್ಲಿ ಪಲ್ಲವಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ. ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪತ್ನಿ ಪಲ್ಲವಿಯನ್ನು ಮೇ 3ರವರೆಗೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಬೆಂಗಳೂರಿನ 39ನೇ ಎಸಿಎಂಎಂ ನ್ಯಾಯಾಲಯ ಜಡ್ಜ್ ಆದೇಶಿಸಿದ್ದಾರೆ.

ಅವರ ಪುತ್ರಿ ಕೃತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಎ 2 ಆರೋಪಿಯಾಗಿರುವ ಪುತ್ರಿ ಕೃತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳಿಸಿದ್ದರು. ಪಲ್ಲವಿ ಅವರನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular