ಬೆಂಗಳೂರು : ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ, ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ವಿನೂತನ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಯು ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಯ ಕಾರ್ಯನೀತಿ ಸೂಚನೆಗಳನ್ನು ಸರ್ಕಾರದ ಆದೇಶ : 16 2 0 2020 8 20:17.08.2021, 05.09.2022, 09.03.2023 ಹಾಗೂ ದಿನಾಂಕ: 02.04.2025 ಗಳಲ್ಲಿ ನೀಡಲಾಗಿದೆ.KASS ಯೋಜನೆಯು ರಾಜ್ಯ ಸರ್ಕಾರದ ನೌಕರರಿಗೆ ಐಚ್ಛಿಕವಾಗಿದ್ದು, ಯೋಜನೆಯಡಿ ಸರ್ಕಾರಿ ನೌಕರರು ವೈದ್ಯಕೀಯ ಸೌಲಭ್ಯ ಪಡೆಯಲು/ ಹೊರಗುಳಿಯಲು (Opt in / Opt Out) ಆಯ್ಕೆ / ಇಚ್ಛೆ ವ್ಯಕ್ತಪಡಿಸುವ ಕುರಿತಂತೆ ಈ ಕೆಳಕಂಡ ಸೂಚನೆಗಳನ್ನು ಹೊರಡಿಸಲಾಗಿದೆ ಹಾಗೂ ಅನುಬಂಧಗಳನ್ನು ಲಗತ್ತಿಸಲಾಗಿದೆ:
- ಯೋಜನೆಯಡಿ ಸರ್ಕಾರಿ ನೌಕರರು ಒಳಪಡುವ ಕಾರ್ಯವಿಧಾನದ ಬಗ್ಗೆ: ಈ ಯೋಜನೆಯು ಎಲ್ಲಾ ಅರ್ಹ ಸರ್ಕಾರಿ ನೌಕರರಿಗೆ ಅನ್ವಯವಾಗಲಿದ್ದು, ಯೋಜನೆಯ ಸೌಲಭ್ಯ ಪಡೆಯುವುದು ಐಚ್ಛಿಕವಾಗಿದ್ದು (Optional), ಕಡ್ಡಾಯ(Mandatory) ಆಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರಿ ನೌಕರರು ಈ ಯೋಜನೆಯ ಸದುಪಯೋಗ ಪಡೆಯಲು ಇಚ್ಚಿಸಿದಲ್ಲಿ ಮಾತ್ರ, ತನ್ನ ಆಯ್ಕೆಯನ್ನು ಸೂಚಿಸಬಹುದಾಗಿದೆ. ಇಚ್ಛೆ ಇಲ್ಲದ ಪಕ್ಷದಲ್ಲಿಯೂ ಸಹ ನಿಗದಿತ ನಮೂನೆಯಲ್ಲಿ ತಿಳಿಸಬಹುದಾಗಿದೆ.
- ನೋಂದಾವಣೆಗೆ ಸಂಬಂಧಿಸಿದಂತೆ ಉಲ್ಲೇಖಿತ ದಿನಾಂಕ:09.03.2023 ರ ಆದೇಶದ ಅನುಬಂಧಗಳಲ್ಲಿ ನೋಂದಾವಣೆ ಅರ್ಜಿ ನಮೂನೆಗಳನ್ನು, ವಿವಿಧ ಘೋಷಣಾ ಪತ್ರಗಳನ್ನು ಹಾಗೂ ನೋಂದಾವಣೆ ಕಾರ್ಯವಿಧಾನಗಳನ್ನು ನಿರ್ಧಿಷ್ಟಪಡಿಸಲಾಗಿದೆ. ಇವುಗಳನ್ನು ಎಲ್ಲಾ ಸರ್ಕಾರಿ ನೌಕರರು ಹಾಗೂ ಡಿಡಿಓಗಳು (DDOs) ತಪ್ಪದೇ ಅನುಸರಿಸತಕ್ಕದ್ದು. HRMS ತಂತ್ರಜ್ಞಾನದಲ್ಲಿ ಡಿಡಿಓಗಳು ಅರ್ಜಿಗಳನ್ನು ಅಪ್ ಲೋಡ್ ಮಾಡಲು ಕ್ರಮವಹಿಸುವುದು.
- ಯೋಜನೆಯಲ್ಲಿ ಸರ್ಕಾರಿ ನೌಕರರನ್ನು ನೋಂದಾಯಿಸುವ ಬಗ್ಗೆ HRMS ನಿರ್ದೇಶನಾಲಯವು ಸಹ ದಿನಾಂಕ: 30.05.2023 ಹಾಗೂ 05.06.2023 ರಂದು ವಿವರವಾದ ಮಾರ್ಗಸೂಚಿಗಳನ್ನು ಹಾಗೂ KASS-ಡಿಡಿಓ ಬಳಕೆದಾರರ ಕೈಪಿಡಿ, WEB APPLICATION ಮುಂತಾದ ವಿವರಗಳನ್ನು ನೀಡಿರುತ್ತದೆ. ಈ ಸೂಚನೆಗಳನ್ನು ಎಲ್ಲಾ ಇಲಾಖೆಗಳ ಡಿಡಿಓಗಳು ತಪ್ಪದೇ ಅನುಸರಿಸುವುದು ಹಾಗೂ ನೌಕರರ ನೋಂದಾವಣೆಯನ್ನು ಚುರುಕುಗೊಳಿಸುವುದು.
- ಸರ್ಕಾರಿ ನೌಕರ ಯೋಜನೆಗೆ ಒಳಪಡಲು ಆಯ್ಕೆಯನ್ನು ವ್ಯಕ್ತಪಡಿಸಲು ಉದ್ದೇಶಿಸಿದಲ್ಲಿ ದಿನಾಂಕ: 20.05.2025 ರ ಒಳಗಾಗಿ ಈ ಸಂಬಂಧ ಅನುಬಂಧ-2 ರ ನಮೂನೆ-1 ರಲ್ಲಿ ಘೋಷಣೆಯನ್ನು ತನ್ನ ಮೇಲಾಧಿಕಾರಿ ಮೂಲಕ ಡಿಡಿಓ ಗಳಿಗೆ ಸಲ್ಲಿಸತಕ್ಕದ್ದು. ಇಂತಹ ಘೋಷಣೆಯನ್ನು ಸಲ್ಲಿಸುವ ನೌಕರರಿಂದ ಯೋಜನೆಯ ವಂತಿಕೆಯನ್ನು ಮೇ 2025ರ ಮಾಹೆಯಿಂದ ಸ್ವಯಂಚಾಲಿತವಾಗಿ HRMS ನಲ್ಲಿ ಕಟಾಯಿಸಲಾಗುವುದು.
- ನೌಕರರು ಈ ಯೋಜನೆಗೆ ಒಳಪಡದೇ ಇರಲು ಇಚ್ಚಿಸಿದಲ್ಲಿ ದಿನಾಂಕ: 20.05.2025 ರ ಒಳಗಾಗಿ ಈ ಸಂಬಂಧ ಅನುಬಂಧ-2 ರ ನಮೂನೆ-2 ರಲ್ಲಿ ಘೋಷಣೆಯನ್ನು ತನ್ನ ಮೇಲಾಧಿಕಾರಿ ಮೂಲಕ ಡಿಡಿಓ ಗಳಿಗೆ ಸಲ್ಲಿಸತಕ್ಕದ್ದು. ತಪ್ಪಿದಲ್ಲಿ, ಇಂತಹ ನೌಕರರು ಯೋಜನೆಗೆ ಒಳಪಡಲು ಇಚ್ಚಿಸಿದ್ದಾರೆಂದು ಪರಿಗಣಿಸಿ ಅವರ ಮೇ 2025ರ ವೇತನದಿಂದ HRMS ಮುಖಾಂತರ ವಂತಿಕೆ ಕಟಾವಣೆ ಮಾಡಲಾಗುತ್ತದೆ







You Might Also Like
TAGGED:ಆರೋಗ್ಯ ಸಂಜೀವಿನಿ