ಮಂಡ್ಯ: ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದರಾಮಯ್ಯ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ರಾಜ್ಯ ಸರ್ಕಾರದ ವಿರೋಧವಿದೆ ಎಂದರು.
ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಹಾಗೂ ಇಂಗ್ಲಿಷ್ ಬಳಕೆಗೆ ಪೂರವಾದ ದ್ವಿಭಾಷಾ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಿಲ್ಲ. ರಾಜ್ಯದಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಕಲಿಸುತ್ತೇವೆ. ಯಾವುದೇ ಕಾರಣಕ್ಕೂ ಹಿಂದಿ ಹೇರಿಕೆಗೆ ಅವಕಾಶ ಕೊಡಲ್ಲ ಎಂದು ಹೇಳಿದರು.