BREAKING NEWS: ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರ ದಾಳಿ: ಇಬ್ಬರು ಸಾವು; 12 ಜನರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪಹಲ್ಗಾಮ್ ನಲ್ಲಿ ನಡೆದಿದೆ.

ಕಾಲ್ನಡಿಗೆ ಮೂಲಕ ಪಹಲ್ಗಾಮ್ ಪ್ರದೇಶಕ್ಕೆ ತೆರಳುತ್ತಿದ್ದ ಪ್ರವಾಸಿಗರ ಮೇಲೆ ನಾಲ್ವರು ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸೇನೆ ಸಮವಸ್ತ್ರದಲ್ಲಿ ಬಂದು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉಗ್ರರ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ೧೨ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ದಾಳಿ ಬೆನ್ನಲ್ಲೇ ಪಹಲ್ಗಾಮ್ ಪ್ರದೆಶವನ್ನು ಸೇನೆ ಸುತ್ತುವರೆದಿದ್ದು, ಉಗ್ರರ ವಿರುದ್ಧ ಶೋಧಕಾರ್ಯಾಚರಣೆ ನಡೆಸಿದೆ.

ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಹೊಣೆಯನ್ನು ಪಾಕಿಸ್ತಾನದ ಉಗ್ರ ಸಂಘಟನೆ ಟಿಆರ್ ಎಫ್ ಹೊಣೆ ಹೊತ್ತುಕೊಂಡಿದೆ. ಟಿಆರ್ ಎಫ್ ಇದು ಲಷ್ಕರ್-ಎ-ತೊಯ್ಬಾ ಸಂಘಟನೆಯ ಅಂಗಸಂಘಟನೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read