ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ್ದ ದಾಳಿಯಲ್ಲಿ ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ.
ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದು ಅವರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಓರ್ವರು ಬಲಿಯಾಗಿದ್ದಾರೆ. 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಕನ್ನಡಿಗ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಪಲ್ಲವಿ ಗಾಯಗೊಂಡಿದ್ದು, ತನ್ನ ಕಣ್ಣೆದುರೇ ಪತಿ ಮೃತಪಟ್ಟಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ. ಇನ್ನೋರ್ವ ಕನ್ನಡಿಗ ಅಭಿಜ್ಞ ರಾವ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.