HomeLatest Newsವಸತಿ ಶಾಲೆ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಏ. 29ರೊಳಗೆ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚನೆ

ವಸತಿ ಶಾಲೆ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಏ. 29ರೊಳಗೆ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುವ ಶಾಲೆಗಳ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ.

ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಸಂಗೊಳ್ಳಿ ರಾಯಣ್ಣ, ನಾರಾಯಣಗುರು ಸೇರಿ ಇತರೆ ವಸತಿ ಶಾಲೆಗಳಲ್ಲಿ ಆರನೇ ತರಗತಿ ಪ್ರವೇಶಕ್ಕೆ ಅರ್ಹರಾದವರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರತೀಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಏಪ್ರಿಲ್ 29ರೊಳಗೆ ಸಂಬಂಧಿಸಿದ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಬೇಕು. ಶಾಲಾ ಹಂತದಲ್ಲಿಯೇ ಮೂಲ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಆರನೇ ತರಗತಿ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ. ಏಪ್ರಿಲ್ 28ರ ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular