BREAKING: 28 ಪ್ರವಾಸಿಗರ ಹತ್ಯೆಗೈದ ಉಗ್ರರ ಕೃತ್ಯಕ್ಕೆ ಅಮೆರಿಕ ಖಂಡನೆ: ಮೋದಿಗೆ ಕರೆ ಮಾಡಿ ಭಾರತಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ ಟ್ರಂಪ್

  ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಪ್ರಧಾನಿ ಮೋದಿ ಅವರೊಂದಿಗಿನ ತಮ್ಮ ಫೋನ್ ಕರೆಯಲ್ಲಿ, ಈ ಘೋರ ದಾಳಿಯ ಅಪರಾಧಿಗಳನ್ನು ಸದೆಬಡಿಯಲು ಭಾರತಕ್ಕೆ ಅಮೆರಿಕದ ಸಂಪೂರ್ಣ ಬೆಂಬಲವನ್ನು ಅಮೆರಿಕ ಅಧ್ಯಕ್ಷರು ವ್ಯಕ್ತಪಡಿಸಿದ್ದಾರೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಅಮಾಯಕರ ಜೀವಹಾನಿಗೆ ತಮ್ಮ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘೋರ ದಾಳಿಯ ಅಪರಾಧಿಗಳನ್ನು ಸದೆಬಡಿಯಲು ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ಒಟ್ಟಾಗಿ ನಿಂತಿವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read