ಕೊಪ್ಪಳ: ಬಾಲಕನೊಬ್ಬ ಆಟೋ ಚಾಲನೆ ಮಾಡುವಾಗ ಅಪಘಾತ ಎಸಗಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದಕ್ಕೆ ಆಟೋ ಮಾಲೀಕನಿಗೆ 1.41 ಕೋಟಿ ರೂಪಾಯಿ ದಂಡ ವಿಧಿಸಿ ಕೊಪ್ಪಳ ಜಿಲ್ಲೆ ಗಂಗಾವತಿಯ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ.
2021ರ ಮಾರ್ಚ್ 10ರಂದು ಯಲಬುರ್ಗಾದಲ್ಲಿ ಅಪಘಾತ ಸಂಭವಿಸಿತ್ತು. ಯಲಬುರ್ಗಾದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಗಂಗಾವತಿ ನಿವಾಸಿ ರಾಜಶೇಖರ ಪಾಟೀಲ್ ಅಪಘಾತದಲ್ಲಿ ಮೃತಪಟ್ಟಿದ್ದರು. ಆಟೋ ಚಾಲನೆ ಮಾಡುತ್ತಿದ್ದ 17 ವರ್ಷದ ಬಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣವೆಂದು ದೂರು ನೀಡಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ ಎಸ್ ಗಾಣಿಗೇರ ಅವರು ಬಾಲಕನಿಗೆ ಆಟೋ ಚಾಲನೆ ಮಾಡಲು ಕೊಟ್ಟಿದ್ದ ಮಾಲೀಕನಿಗೆ ಭಾರೀ ಮೊತ್ತದ ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ರಾಜಶೇಖರ ಪಾಟೀಲ್ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ಸೂಚಿಸಿದ್ದಾರೆ.