HomeLive Newsವಕ್ಫ್ ಮಂಡಳಿಗೆ ಮುಸ್ಲಿಮರ ವಿವಾಹ ನೋಂದಣಿ ಅಧಿಕಾರ: ಅರ್ಜಿಗೆ ಉತ್ತರಿಸಲು ವಿಳಂಬ ತೋರಿದ ಸರ್ಕಾರದ ವಿರುದ್ಧ...

ವಕ್ಫ್ ಮಂಡಳಿಗೆ ಮುಸ್ಲಿಮರ ವಿವಾಹ ನೋಂದಣಿ ಅಧಿಕಾರ: ಅರ್ಜಿಗೆ ಉತ್ತರಿಸಲು ವಿಳಂಬ ತೋರಿದ ಸರ್ಕಾರದ ವಿರುದ್ಧ ಹೈಕೋರ್ಟ್ ವಾಗ್ದಾಳಿ

ಬೆಂಗಳೂರು: ಮುಸ್ಲಿಮರ ವಿವಾಹ ನೋಂದಣಿ ಮತ್ತು ಮುಸ್ಲಿಂ ದಂಪತಿಗೆ ವಿವಾಹ ನೋಂದಣಿಯ ಪ್ರಮಾಣ ಪತ್ರ ವಿತರಿಸುವ ಅಧಿಕಾರ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ನೀಡಿರುವ ಸಂಬಂಧ ಆಕ್ಷೇಪಣೆ ಸಲ್ಲಿಸಲು ಮೀನಮೇಷ ಎಣಿಸುತ್ತಿರುವ ಸರ್ಕಾರದ ವಿರುದ್ಧ ಹೈಕೋರ್ಟ್ ವಾಗ್ದಾಳಿ ನಡೆಸಿದೆ.

ಅರ್ಜಿಗೆ ಉತ್ತರಿಸಲು ಕಾಲಹರಣ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಆಕ್ಷೇಪಣೆ ಸಲ್ಲಿಸಲು ಜೂನ್ 11ರ ಕೊನೆಯ ಗಡುವು ನೀಡಲಾಗಿದೆ.

ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊರಡಿಸಿದ ಆದೇಶ ಪ್ರಶ್ನಿಸಿ ಬೆಂಗಳೂರಿನ ಕೆ ಆಲಂ ಪಾಷಾ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಸರ್ಕಾರಿ ವಕೀಲರು ಅರ್ಜಿಗೆ ಉತ್ತರ ನೀಡಲು ಮತ್ತೆ ಕಾಲಾವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಈ ಹಿಂದೆ ಮೂರು ಬಾರಿ ಸಮಯ ಕೇಳಿದ್ದು, ಈಗ ಮತ್ತೆ ಸಮಯ ಕೇಳಲಾಗುತ್ತಿದೆ. ಕೊನೆಯ ಬಾರಿ ಅವಕಾಶ ನೀಡಲಾಗುವುದು. ಜೂನ್ 11ರೊಳಗೆ ಉತ್ತರ ನೀಡಬೇಕು. ಇಲ್ಲವಾದಲ್ಲಿ ನ್ಯಾಯಾಲಯ ತನ್ನದೇ ಆದ ತೀರ್ಮಾನ ಕೈಗೊಳ್ಳಲಿದೆ ಎಂದು ಹೈಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular