HomeLatest NewsBIG NEWS : 'ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : ಇಲ್ಲಿದೆ ‘ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ...

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಇಲ್ಲಿದೆ ‘ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ ಸಂಪೂರ್ಣ ಪಟ್ಟಿ |GOVT EMPLOYEE

ಬೆಂಗಳೂರು : ಮಾನ್ಯ ಜಿಲ್ಲಾ, ತಾಲ್ಲೂಕು ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರ ಆದ್ಯ ಗಮನಕ್ಕೆ.. ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿನ ಆಸ್ಪತ್ರೆ /ಆರೋಗ್ಯ ಸಂಸ್ಥೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ ನೊಂದಾಯಿಸುವ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ದಿನಾಂಕ: 18-4-2023ರ ಅಧಿಕೃತ ಜ್ಞಾಪನ ಪತ್ರದಲ್ಲಿ ಸರ್ಕಾರಿ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳ ಜೊತೆಗೆ ಖಾಸಗಿ ಆಸ್ಪತ್ರೆ / ಆರೋಗ್ಯ ಸಂಸ್ಥೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ ದಿ: 28-04-2023 ರೊಳಗಾಗಿ ನೋಂದಾವಣಿ ಮಾಡಿಕೊಳ್ಳಲು ಅವಕಾಶ ನೀಡಿ ಮಾರ್ಗಸೂಚಿ (SOP) ಯನ್ನು ಬಿಡುಗಡೆಗೊಳಿಸಿ ಜಿಲ್ಲಾವಾರು ಸಂಯೋಜಕರನ್ನು ನೇಮಕಗೊಳಿಸಲಾಗಿದೆ (ಪ್ರತಿ ಲಗತ್ತಿಸಿದೆ)
ಆದ್ದರಿಂದ ತಾವು ತಮ್ಮ ಜಿಲ್ಲಾ / ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗುರುತಿಸಿರುವ ಖಾಸಗಿ ಆಸ್ಪತ್ರೆ /ಆರೋಗ್ಯ ಸಂಸ್ಥೆಗಳೂ ಸೇರಿದಂತೆ (ಆಸ್ಪತ್ರೆಗಳ ಪಟ್ಟಿ ಲಗತ್ತಿಸಿದೆ) ಇನ್ನಾವುದೇ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳಿದ್ದಲ್ಲಿ ಅಂತಹ ಆಸ್ಪತ್ರೆಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳುವ ಸಂಬಂಧ ತಮ್ಮ ಜಿಲ್ಲಾ ಸಂಯೋಜಕರು (District Coordinators of SATS) ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ದಿನಾಂಕ: 28-04-2028ರೊಳಗಾಗಿ ನೋಂದಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ತುರ್ತು ಕ್ರಮವಹಿಸಲು ಸೂಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular