ಶ್ರೀನಗರ: ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ರೆಸಾರ್ಟ್‌ನಲ್ಲಿ ಭಯೋತ್ಪಾದಕರು 25 ಪ್ರವಾಸಿಗರು ಮತ್ತು ಸ್ಥಳೀಯ ಮಾರ್ಗದರ್ಶಿಯನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ, ಕಾಶ್ಮೀರ ಕಣಿವೆಯ ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಮ್ ಗೆ ಸೂಚನೆ ನೀಡಲಾಗಿದೆ. ಏಪ್ರಿಲ್ 27ರವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಸರ್ಕಾರಿ ನೌಕರರಿಗೆ ತಿಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಅಧಿಕಾರಿಗಳು ಬುಧವಾರ ಪಿಎಂ ಪ್ಯಾಕೇಜ್ ನೌಕರರು ಮತ್ತು ಜಮ್ಮು ಮೂಲದ ಮೀಸಲು ವರ್ಗದ ನೌಕರರಿಗೆ ಒಂದು ವಾರ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿದ್ದಾರೆ.
ಪಿಎಂ ಪ್ಯಾಕೇಜ್ ಅಡಿಯಲ್ಲಿ ಹೆಚ್ಚಿನ ಉದ್ಯೋಗಿಗಳು ವಲಸೆ ಬಂದ ಕಾಶ್ಮೀರಿ ಪಂಡಿತರು ಮತ್ತು ಜಮ್ಮು ಮೂಲದ ಮೀಸಲು ವರ್ಗದ ನೌಕರರು ಪರಿಶಿಷ್ಟ ಜಾತಿ(ಎಸ್‌ಸಿ) ಅಥವಾ ಪರಿಶಿಷ್ಟ ಪಂಗಡ(ಎಸ್‌ಟಿ) ಗಳಿಗೆ ಸೇರಿದವರು.
ಎಂ ಪ್ಯಾಕೇಜ್ ಅಡಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಉದ್ಯೋಗಿಗಳು ಮತ್ತು ಜಮ್ಮು ಮೂಲದ ಎಲ್ಲಾ ಮೀಸಲು ವರ್ಗದ ನೌಕರರಿಗೆ ಈ ವಾರದ ಅವಧಿ(ಏಪ್ರಿಲ್ 27 ರವರೆಗೆ) ತಕ್ಷಣದಿಂದ ಜಾರಿಗೆ ಬರುವಂತೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
