ಬೆಂಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳನ್ನು ದೆಹಲಿಯಿಂದ ಬೆಂಗಳೂರುಗೆ ವಿಮಾನದ ಮೂಲಕ ತರಲಾಗಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತದೇಹಗಳನ್ನ ತಂದು ಅಲ್ಲಿಂದ ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.
ಶಿವಮೊಗ್ಗದ ಮಂಜುನಾಥ್ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ, ಚನ್ನಗಿರಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ. ಬೆಳಗ್ಗೆ 9 ಗಂಟೆಗೆ ಮಂಜುನಾಥ್ ನಿವಾಸದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದ್ದು, ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಂಗಳೂರಿನ ಮತ್ತಿಕೆರೆಯ ನಿವಾಸಕ್ಕೆ ಭರತ್ ಭೂಷಣ್ ಮೃತದೇಹ ಕೊಂಡೊಯ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್ ಅಳವಡಿಸಿ ಪೊಲೀಸರು ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಮನೆ, ಸುತ್ತಲಿನ ರಸ್ತೆಯ ಬಳಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
#WATCH | Karnataka | Bharat Bhushan from Bengaluru and Manjunath Rao from Shivamogga were killed in the #PahalgamTerroristAttack, their mortal remains have been brought to Bengaluru from Srinagar. pic.twitter.com/hFLoOdKj4m
— ANI (@ANI) April 23, 2025