ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಅಥವಾ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ತಂಬಾಕು ಉತ್ಪನ್ನ ಜಗಿದರೆ ಅಥವಾ ಉಗುಳಿದರೆ ಕನಿಷ್ಠ 500 ರೂಪಾಯಿ ದಂಡ ವಿಧಿಸಲಾಗುವುದು.
ಮೆಟ್ರೋ ಪ್ರಯಾಣದ ವೇಳೆ ವ್ಯಕ್ತಿಯೊಬ್ಬ ಗುಟ್ಕಾ ಸೇವಿಸಿದ ದೃಶ್ಯಗಳು ಇತ್ತೀಚೆಗೆ ಜಾಲತಾಣದಲ್ಲಿ ವೈರಲ್ ಆಗಿದ್ದವು. ಜನಪ್ರತಿನಿಧಿಗಳಿಂದಲೂ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ದಂಡ ವಿಧಿಸುವ ನಿರ್ಧಾರ ಕೈಗೊಂಡಿದೆ.
ಇಂತಹ ಘಟನೆಗಳ ಬಗ್ಗೆ ದೂರುಗಳು ಹೆಚ್ಚಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ದಂಡ ವಿಧಿಸುವ ಕ್ರಮ ಕೈಗೊಳ್ಳಲಾಗಿದೆ. ಇಂತಹ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಗಸ್ತು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಮೆಟ್ರೋ ನಿಲ್ದಾಣ ಅಥವಾ ರೈಲಿನಲ್ಲಿ ಪ್ರಯಾಣಿಕರು ತಂಬಾಕು ಉತ್ಪನ್ನ ಜಗಿದರೆ ಅಥವಾ ಉಗುಳಿದರೆ ಕನಿಷ್ಠ 500 ರೂಪಾಯಿ ದಂಡ ವಿಧಿಸಲಾಗುವುದು.