HomeLatest NewsBIG NEWS: 'ಗ್ರೇಟರ್ ಬೆಂಗಳೂರು' ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ: 7 ಪಾಲಿಕೆಗಳಾಗಿ ಬಿಬಿಎಂಪಿ ವಿಭಜನೆಗೆ ಅಸ್ತು

BIG NEWS: ‘ಗ್ರೇಟರ್ ಬೆಂಗಳೂರು’ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ: 7 ಪಾಲಿಕೆಗಳಾಗಿ ಬಿಬಿಎಂಪಿ ವಿಭಜನೆಗೆ ಅಸ್ತು

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಈ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗಳ ಪಾಲಿಗೆಯನ್ನು 7 ಪಾಲಿಕೆಗಳಿಗಿಂತ ಹೆಚ್ಚಿಲ್ಲದಂತೆ ನಗರ ಪಾಲಿಕೆ ರಚಿಸುವ ಸರ್ಕಾರದ ನಿರ್ಧಾರಕ್ಕೆ ಒಪ್ಪಿಗೆ ಸಿಕ್ಕಿದೆ.

ವಿಧಾನಸಭೆಯಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಿದಾಗ ಬೆಂಗಳೂರಿನ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ನಂತರ ಜಂಟಿ ಆಯ್ಕೆ ಸಮಿತಿಗೆ ಇದನ್ನು ವಹಿಸಲಾಗಿತ್ತು. ಈ ಸಮಿತಿಯ ಶಿಫಾರಸುಗಳೊಂದಿಗೆ ತಿದ್ದುಪಡಿಯ ರೂಪದಲ್ಲಿ ಮಂಡನೆಯಾದ ವಿಧೇಯಕವನ್ನು ಮಾರ್ಚ್ ನಲ್ಲಿ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗಿತ್ತು.

ರಾಜ್ಯಪಾಲರು ಸಹಿಗೆ ಅದನ್ನು ಕಳುಹಿಸಿದ್ದು, ಸರ್ಕಾರದಿಂದ ಕೆಲವು ಸ್ಪಷ್ಟನೆಯನ್ನು ಬಯಸಿದ್ದ ರಾಜ್ಯಪಾಲರು ಇದೀಗ ಅಂತಿಮವಾಗಿ ವಿಧೇಯಕಕ್ಕೆ ಸಹಿ ಹಾಕಿದ್ದಾರೆ. ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಸಮನ್ವಯ ಮತ್ತು ಮೇಲ್ವಿಚಾರಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ, ಗರಿಷ್ಠ 7 ನಗರ ಪಾಲಿಕೆಗಾಗಿ ವಿಭಜಿಸುವ ಅವಕಾಶ, ವಾರ್ಡ್ ಸಮಿತಿಗಳನ್ನು ನಗರಾಡಳಿತದ ಮೂಲ ಘಟಕಗಳನ್ನಾಗಿಸುವುದನ್ನು ಈ ವಿಧೇಧಯಕ ಒಳಗೊಂಡಿದೆ. ಈ ಹೊಸ ಕಾಯ್ದೆಗೆ ರಾಜ್ಯ ಸರ್ಕಾರ ರಾಜ್ಯ ಪತ್ರ ಪ್ರಕಟಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular