HomeLatest Newsಪತ್ರಿಕೆ ಓದಿ ಮಗನ ಸಾವಿನ ಸುದ್ದಿ ತಿಳಿದ ತಂದೆ : ಬೆಂಗಳೂರಿನ ಭೂಷಣ್ ಸಾವಿನ ಸುದ್ದಿ...

ಪತ್ರಿಕೆ ಓದಿ ಮಗನ ಸಾವಿನ ಸುದ್ದಿ ತಿಳಿದ ತಂದೆ : ಬೆಂಗಳೂರಿನ ಭೂಷಣ್ ಸಾವಿನ ಸುದ್ದಿ ಬಚ್ಚಿಟ್ಟಿದ್ದ ಕುಟುಂಬ |Pahalgam terrorist attack

ಜಮ್ಮು-ಕಾಶ್ಮೀರದಲ್ಲಿ ಮಂಗಳವಾರ ನಡೆದ ಭೀಕರ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಪ್ರಾಣ ಕಳೆದುಕೊಂಡಿದ್ದಾರೆ.

ಪಹಲ್ಗಾಮ್ನಲ್ಲಿ ಪ್ರವಾಸದಲ್ಲಿದ್ದ ವೇಳೆ ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ದಾಳಿಯಾದ ಸ್ಥಳದಲ್ಲೇ ಇದ್ದ ಭೂಷಣ್ ಕುಟುಂಬ, ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದಾರೆ. ಅಲ್ಲೇ ಇದ್ದ ಮರವೊಂದರ ಬಳಿ ಮಗು ಜೊತೆ ಅವಿತುಕುಳಿತಿದ್ದ ಭರತ್ ಭೂಷಣ್ ತಲೆಗೆ ಉಗ್ರರು ಶೂಟ್ ಮಾಡಿದ್ದು, ಅಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಬೆಂಗಳೂರಿನ ಭರತ್ ಭೂಷಣ್ ಮನೆಗೆ ಮಧ್ಯರಾತ್ರಿ ಭರತ್ ಪಾರ್ಥಿವ ಶರೀರ ತಲುಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಭರತ್ ಅವರ ತಂದೆ ತಾಯಿ ವಯೋವೃದ್ದರಾಗಿದ್ದು, ಅಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಮಗನ ಸಾವಿನ ಸುದ್ದಿ ತಂದೆಗೆ ಗೊತ್ತೇ ಇರಲಿಲ್ಲ. ಭೂಷಣ್ ಕುಟುಂಬಸ್ಥರು ಭೂಷಣ್ ಸಾವಿನ ಬಗ್ಗೆ ಮೊದಲು ತಿಳಿಸಿರಲಿಲ್ಲ. ಬುಧವಾರ ಪತ್ರಿಕೆ ಓದಿದ ಭೂಷಣ್ ತಂದೆ ಮಗನ ಸಾವಿನ ಸುದ್ದಿ ತಿಳಿದು ಗೋಳಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳನ್ನು ದೆಹಲಿಯಿಂದ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತದೇಹಗಳನ್ನ ತಂದು ಅಲ್ಲಿಂದ ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.
ಶಿವಮೊಗ್ಗದ ಮಂಜುನಾಥ್ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ, ಚನ್ನಗಿರಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ. ಬೆಳಗ್ಗೆ 9 ಗಂಟೆಗೆ ಮಂಜುನಾಥ್ ನಿವಾಸದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದ್ದು, ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಂಗಳೂರಿನ ಮತ್ತಿಕೆರೆಯ ನಿವಾಸಕ್ಕೆ ಭರತ್ ಭೂಷಣ್ ಮೃತದೇಹ ಕೊಂಡೊಯ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್ ಅಳವಡಿಸಿ ಪೊಲೀಸರು ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಮನೆ, ಸುತ್ತಲಿನ ರಸ್ತೆಯ ಬಳಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular