ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಬಲಿಯಾದ ಭರತ್ ಭೂಷಣ್, ಮಂಜುನಾಥ್ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರದಿಂದ ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಭರತ್ ಭೂಷಣ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಬಲಿಯಾದ ಭರತ್ ಭೂಷಣ್, ಮಂಜುನಾಥ್ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರದಿಂದ ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಭರತ್ ಅಂತ್ಯಕ್ರಿಯೆ ವ್ಯವಸ್ಥೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ನೋಡಿಕೊಳ್ಳಲಿದ್ದಾರೆ. ಶಿವಮೊಗ್ಗದಲ್ಲಿ ಮಂಜುನಾಥ್ ಅಂತ್ಯಕ್ರಿಯೆಯನ್ನು ಸಚಿವ ಮಧು ಬಂಗಾರಪ್ಪ ನೋಡಿಕೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಮ್ಮು-ಕಾಶ್ಮೀರದಲ್ಲಿ ಮಂಗಳವಾರ ನಡೆದ ಭೀಕರ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್, ಹಾಗೂ ಶಿವಮೊಗ್ಗದ ಮಂಜುನಾಥ್ ಪ್ರಾಣ ಕಳೆದುಕೊಂಡಿದ್ದಾರೆ.ಪಹಲ್ಗಾಮ್ನಲ್ಲಿ ಪ್ರವಾಸದಲ್ಲಿದ್ದ ವೇಳೆ ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ಕುಟುಂಬದ ಜೊತೆ ಪ್ರವಾಸದಲ್ಲಿದ್ದ ಮಂಜುನಾಥ್ ಹಾಗೂ ಭರತ್ ಭೂಷಣ್ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ.