ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 28 ಜನರು ಬಲಿಯಾಗಿದ್ದಾರೆ. ಈಗಾಗಲೇ ಉಗ್ರರ ವಿರುದ್ಧ ಸೇನೆ ಕಾರ್ಯಾಚರಣೆ ಚುರುಕುಗೊಳಿಸಿಇದೆ. ಮತ್ತೊಂದೆಡೆ ಜಮ್ಮು-ಕಾಶ್ಮೀರ ಪೊಲೀಸರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ.
ಇದೇ ವೇಳೆ ಉಗ್ರರ ಬಗ್ಗೆ ಸುಳಿವು ನೀಡಿದವರಿಗೆ 20 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಗಿ ಇಡಲಾಗುವುದು. ಶಂಕಿತ ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಯಾವುದೇ ಸಂಬಂಧಿತ ಮಾಹಿತಿಗಳಿದ್ದಲ್ಲಿ ಅನಂತ್ ನಾಗ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆ ಸಂಪರ್ಕಿಸಬಹುದು ಎಂದು ಮನವಿ ಮಾಡಿದ್ದಾರೆ.
ಎಸ್ ಪಿ ಅನಂತ್ ನಾಗ್: 9596777666, ಪಿಸಿಆರ್ ಅನಂತ್ ನಾಗ್ :9596777669 ಇ-ಮೇ: dpoanantnag-jk2nic.inಗೆ ಮಾಹಿತಿ ನೀಡಬಹುದು ಎಂದು ಕೋರಲಾಗಿದೆ.